ಉದ್ದೀಪನ ಮದ್ದು ಸೇವಿಸಿ ಸಿಕ್ಕಿ ಬಿದ್ದ ಭಾರತದ ಕ್ರಿಕೆಟರ್

yusuf pathan suspended five months | itskannada Sports

0 23
sports-article-lt os-lt”>

(itskannada): ಇತ್ತೀಚೆಗೆ ನಡೆಸಲಾದ ಉದ್ದೀಪನಾ ಮದ್ದು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಟೀಂ ಇಂಡಿಯಾದ ಆಲ್ ರೌಂಡರ್ ಯೂಸೂಫ್ ಪಠಾಣ್ ಅವರು ಐದು ತಿಂಗಳು ನಿಷೇಧಕ್ಕೊಳಗಾಗಿದ್ದಾರೆ.

2017-18ನೇ ಸಾಲಿನಲ್ಲಿ ಬರೋಡ ತಂಡವನ್ನು ಪ್ರತಿನಿಧಿಸಿ ಆಂಧ್ರಪ್ರದೇಶ ವಿರುದ್ಧ ಏಕೈಕ ಪಂದ್ಯವನ್ನಾಡಿದ್ದ ಯೂಸೂಫ್, ಉದ್ದೀಪನಾ ಮದ್ದು ಸೇವಿಸಿರುವುದು ಸಾಭೀತಾಗಿದೆ. ಹಿನ್ನಲೆಯಲ್ಲಿ ಬಿಸಿಸಿಐ ಕಳೆದ ಆಗಸ್ಟ್ 15ರಂದು ಯೂಸುಫ್ ಮೇಲೆ ನಿಷೇಧ ಹೇರಿದ್ದು, ಇದೀಗ 5 ತಿಂಗಳ ನಿಷೇಧ ಖಾಯಂ ಮಾಡಿರುವುದರಿಂದ ಇದೇ ಜನವರಿ 14 2018ಕ್ಕೆ ಅವರ ಅಮಾನತು ಶಿಕ್ಷೆ ಪೂರ್ಣವಾಗಲಿದೆ. ಹೀಗಾಗಿ ಯೂಸುಫ್ ಮುಂಬರುವ ಐಪಿಎಲ್ ನಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

ಕಳೆದ ವರ್ಷವಷ್ಟೇ ಬಿಸಿಸಿಐ ಕ್ರಿಕೆಟಿಗರಿಗೂ ಡೋಪಿಂಗ್ ಟೆಸ್ಟ್ ಕಡ್ಡಾಯಗೊಳಿಸಿತ್ತು. ಅದರಂತೆ ಕಳೆದ ಮಾರ್ಚ್ ತಿಂಗಳಲ್ಲಿ ನವದೆಹಲಿಯಲ್ಲಿ ಕ್ರಿಕೆಟ್ ಆಟಗಾರರಿಗೆ ಡೋಪಿಂಗ್ ಟೆಸ್ಟ್ ನಡೆಸಲಾಗಿತ್ತು.

ಟೆಸ್ಟ್ ಬಳಿಕ ಯೂಸುಫ್ ಪಠಾಣ್ ಅವರ ಮೂತ್ರ ಪರೀಕ್ಷೆ ವೇಳೆ ‘ಟೆರ್ಬುಟಲೈನ್’ ಎಂಬ ನಿಷೇಧಿತ ರಾಸಾಯನಿಕ ಅಂಶ ಪತ್ತೆಯಾಗಿದೆ ಎಂದು ವಾಡಾ ಅಧಿಕಾರಿಗಳು ತಿಳಿಸಿದ್ದಾರೆ.

ಉದ್ದೀಪನ ಮದ್ದು ಸೇವಿಸಿ ಸಿಕ್ಕಿ ಬಿದ್ದ ಭಾರತದ ಎರಡನೇ ಕ್ರಿಕೆಟರ್ ಎನ್ನುವ ಕುಖ್ಯಾತಿಗೆ ಪಠಾಣ್ ಪಾತ್ರರಾಗಿದ್ದಾರೆ.

ಈ ಮೊದಲು ಡೆಲ್ಲಿ ಮೂಲದ ಯುವ ಎಡಗೈ ಬೌಲರ್ ಪ್ರದೀಪ್ ಸಾಂಗ್ವಾನ್ 2013ರಲ್ಲಿ ಉದ್ದೀಪನ ಮದ್ದು ಸೇವಿಸಿ ಸಿಕ್ಕಿಬಿದ್ದು 18 ತಿಂಗಳುಗಳ ಕಾಲ ನಿಷೇಧಕ್ಕೆ ಗುರಿಯಾಗಿದ್ದರು. | itskannada Sports


 ಇಟ್ಸ್ ಕನ್ನಡ : ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ. ಕನ್ನಡ ಕ್ರೀಡಾ ಸುದ್ದಿಗಳಿಗಾಗಿ ಕ್ರೀಡಾ-ಲೋಕ ಪುಟ ಕ್ಲಿಕ್ಕಿಸಿ ಅಥವಾ ಇಟ್ಸ್ ಕನ್ನಡ ಕ್ರೀಡಾ ಪುಟ –ಕನ್ನಡ ಕ್ರೀಡಾ ಸುದ್ದಿಗಳು-ಇಲ್ಲವೇ ವಿಭಾಗ ಕರ್ನಾಟಕ ಕ್ರೀಡಾ ಸುದ್ದಿಗಳು ಕ್ಲಿಕ್ಕಿಸಿ itskannada :News-Entertainment-Information: for latest news visit-Kannada news– more in kannada Sports click Karnataka Sports News or look at Kannada Sports News

itskannada : News | Entertainment | Information

For Karnataka Kannada News Visit Category Karnataka News or Page Kannada News  Online Today.If you like our News portal, then please consider following us on FacebookTwitterGoogle PlusYouTube 

To Promote Your Business Advertise with Us for more details Contact Us-Click To know more About Us-Check Out FilmPoliticsCrimeHealth TipsSportsRecipesTechnologyAstrologyJokesVideo News in Kannada

Leave A Reply

Your email address will not be published.

17 − 14 =