ಸತೀಶ್ ಜಾರಕಿಹೊಳಿ ರಾಜೀನಾಮೆ ಚಿಂತನೆ

Kannada News (itskannada) Belgaum : ಬೆಳಗಾವಿ: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಈ ಬಾರಿ ಅವರಿಗೆ ಸಚಿವ ಸ್ಥಾನ ನೀಡಿಲ್ಲ. ಆದ್ದರಿಂದ ಅವರ ಕಾರ್ಯಕರ್ತರು ಬೆಳಗಾವಿಯಲ್ಲಿ ಚನ್ನಮ್ಮ ಸರ್ಕಲ್ ಹಾಗೂ ಕಾಂಗ್ರೆಸ್ ಕಛೇರಿ ಎದುರು    ಪ್ರತಿಭಟಿಸಿದರು. ಮತ್ತು ಪಕ್ಷದ ನಾಯಕರ ಬ್ಯಾನರ್ ಕಿತ್ತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.  ಅವರಿಗೆ ಸಚಿವ ಸ್ಥಾನ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂಬ ಎಚ್ಚರಿಕೆ ನೀಡುತ್ತಿದ್ದಾರೆ.ಅಲ್ಲದೇ ಮಾನವ ಬಂಧುತ್ವ ವೇದಿಕೆ ಹಾಗೂ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಬೆಳಗಾವಿಯಲ್ಲಿ ಟೈಯರಿಗೆ ಬೆಂಕಿ  ಬೃಹತ್ ಪ್ರತಿಭಟನೆ ನಡೆಸಿದರು.

ಸತೀಶ್ ಜಾರಕಿಹೊಳಿ ಅವರು ಬೇಸರಗೊಂಡಿದ್ದು ಅಲ್ಲದೆ ಅಭಿಮಾನಿಗಳಿಗೆ ಬಹಳ ನೋವಾಗಿದೆ. ಹೀಗಿರುವಾಗ ನಾನು ಪಕ್ಷದಲ್ಲಿ ಇರಬೇಕೋ ಬೇಡವೋ ಗೊತ್ತಿಲ್ಲ.ಅಲ್ಲದೇ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.  ಇನ್ನೆರಡು ದಿನಗಳಲ್ಲಿ ಬೆಂಬಲಿಗರೊಂದಿಗೆ ಮಾತನಾಡಿ ಮುಂದಿನ ತೀರ್ಮಾನ ತಿಳಿಸುತ್ತೇನೆ ಎಂದಿದ್ದಾರೆ. ಅಲ್ಲದೆ ನಿನ್ನೆ ಖಾಸಗಿ ಹೋಟೆಲೊಂದರಲ್ಲಿ ಅತೃಪ್ತರ ಸಭೆ ನಡೆಸಿದರು. ಮುಂದೆ ಎನಾಗಬಹುದು ಎಂದು ಕಾದು ನೊಡಬೇಕಾಗಿದೆ. ////