ಕಾಲುಬಾಯಿ ಜ್ವರ ಲಸಿಕೆ ಆಂದೋಲನ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

0 13

Chamarajanagar (itskannada) ಚಾಮರಾಜನಗರ: ಜಿಲ್ಲೆಯಲ್ಲಿ ಜೂನ್ 1ರಿಂದ 25ರವರೆಗೆ ಹಮ್ಮಿಕೊಳ್ಳಲು ಉದ್ದೇಶಿಸಿರುವ 14ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮವನ್ನು ಯಾವುದೇ ಲೋಪವಿಲ್ಲದೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಜಿಲ್ಲೆಯಲ್ಲಿ ನಡೆಸಲಿರುವ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ಜ್ವರವನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ 14ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಗುರುತಿಸಲಾಗಿರುವ ಎಲ್ಲ ಜಾನುವಾರುಗಳಿಗೆ ನಿಗಧಿತ ವೇಳೆಯಲ್ಲಿ ಲಸಿಕೆ ನೀಡಬೇಕು. ನಿಯೋಜಿತವಾಗಿರುವ ತಂಡಗಳು ಆಯಾ ದಿನವೇ ಲಸಿಕೆ ನೀಡುವ ಕಾರ್ಯದ ಪ್ರಗತಿ ಸಾಧಿಸಬೇಕು ಎಂದರು.
ಜಾನುವಾರುಗಳಿಗೆ ನೀಡಲಾಗುವ ಲಸಿಕೆಯಿಂದ ಯಾವುದೇ ತೊಂದರೆ ಕಂಡುಬಾರದಂತೆ ಮುಂಜಾಗ್ರತೆ ವಹಿಸಬೇಕು. ಜಾನುವಾರು ಮಾಲೀಕರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಸಹ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಯಾವ ಯಾವ ಗ್ರಾಮಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿಯನ್ನು ಆದಷ್ಟು ಮೊದಲೇ ಪ್ರಚುರಪಡಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶವಾಗಬಾರದು. ಪೂರ್ವ ಸಿದ್ಧತೆಯೊಂದಿಗೆ ಲಸಿಕಾ ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಕಾವೇರಿ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಲಸಿಕಾ ಆಂದೋಲನ ಕುರಿತು ಸಮರ್ಪಕವಾಗಿ ಮಾಹಿತಿ ಒದಗಿಸಬೇಕು. ಗುರುತಿಸಲಾಗಿರುವ ಎಲ್ಲ ಪ್ರದೇಶಗಳಲ್ಲೂ ಪೂರ್ವನಿಯೋಜಿತ ವೇಳಾಪಟ್ಟಿ ಅನುಸಾರ ಕಾರ್ಯಕ್ರಮ ಪೂರ್ಣಗೊಳಿಸಬೇಕು ಎಂದರು.
ಚಾಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿಜಯಕುಮಾರ್, ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಪ್ರಭಾರ ಉಪನಿರ್ದೇಶಕರಾದ ವೆಂಕಟರಾಮು, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ////

Stay Updated with itsKannada, to know more Latest Kannada News – Read Kannada News Updates Kannada News Online – Get Latest News Headlines Breaking News in Kannada

ತ್ವರಿತ ಕನ್ನಡ ಸುದ್ದಿ ಹಾಗೂ ಕ್ಷಣಕ್ಷಣದ ಕನ್ನಡ ನ್ಯೂಸ್ ಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ – its-Kannada