ವೀರಯೋಧ ಅರ್ಜುನನಿಗೆ ಅಂತಿಮ ನಮನ

Kannada News (itskannada) Dharwad – ಧಾರವಾಡ : ಅಸ್ಸಾಂನಲ್ಲಿ ಸೇವೆಯಲ್ಲಿದ್ದ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ವೀರಯೋಧ ಅರ್ಜುನ ಯಲ್ಲಪ್ಪ ಅಣ್ಣಿಗೇರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 12 ವರ್ಷದಿಂದ ಸೇನೆಯಲ್ಲಿದ್ದ ಯೋಧ ಅರ್ಜುನ ಕರ್ತವ್ಯದಲ್ಲಿದ್ದಾಗ ಪಾರ್ಶ್ವವಾಯು ಆಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.

ಮೊರಬ ಗ್ರಾಮದ ಪ್ಯಾಟಿ ಓಣಿಯ ಮಹಾತ್ಮಾ ಗಾಂಧಿ ಪುತ್ಥಳಿ ಬಳಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಗ್ರಾಮದಲ್ಲಿ ಯೋಧನ ಸಂಬಂಧಿಕರ, ಸ್ನೇಹಿತರ ಮತ್ತು ಸಾರ್ವಜನಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಅರ್ಜುನ್ ಗೆ ತಂದೆ, ತಾಯಿ, ನಾಲ್ವರು ಸಹೋದರರು ಹಾಗೂ ನಾಲ್ವರು ಸಹೋದರಿಯರು ಇದ್ದಾರೆ. ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಉಪವಿಭಾಗಾಧಿಕಾರಿ ಪಿ.ಜಯಮಾಧವ ,ಡಿವೈಎಸ್ ಪಿ ಚಂದ್ರಶೇಖರ, ತಹಸೀಲ್ದಾರ ಕೆ.ಬಿ.ಕೋರಿಶೆಟ್ಟರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ವಿಂಗ್ ಕಮಾಂಡರ್ ಈಶ್ವರ ಕೋಡೊಳ್ಳಿ, ಗ್ರಾಮಸ್ಥರು, ಮಕ್ಕಳು ಸೇರಿದಂತೆ ಇತರರು ಅಂತಿಮ ನಮನ ಸಲ್ಲಿಸಿದರು. ////Dharwad News Online