ಬೈಕಿಗೆ ಲಾರಿ ಢಿಕ್ಕಿ ಸವಾರ ಸ್ಥಳದಲ್ಲೇ ಸಾವು

Crime News : (itskannada) ಉಪ್ಪಿನಂಗಡಿ: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಪೆದಮಲೆ ಎಂಬಲ್ಲಿ ಬುಧವಾರದಂದು ನಡೆದಿದೆ.

ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಪಿಲಿಗೂಡಿನ ಮೂಡಬೈಲ್‌ ನಿವಾಸಿ ಅಶೋಕ್ ಪೂಜಾರಿ(29) ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಬೆಳ್ತಂಗಡಿ ಕಡೆಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಎದುರುಗಡೆಯಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಶೋಕ್ ಪೂಜಾರಿಗೆ ಎಪ್ರಿಲ್ 30 ರಂದು ಮದುವೆ ನಿಶ್ಚಯವಾಗಿತ್ತು. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. || Karnataka Crime News