ದುನಿಯಾ ವಿಜಯ್ ವಿರುದ್ಧ ಎಫ್ ಐ ಆರ್ ದಾಖಲು

Kannada News (itskannada) ಬೆಂಗಳೂರು: ದುನಿಯಾ ವಿಜಯ್ ವಿರುದ್ಧ ಎಫ್ ಐ ಆರ್ ದಾಖಲು : ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ವಿರುದ್ದ ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಚಿತ್ರೀಕರಣ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಪ್ರಾಣತೆತ್ತ ಸಹ ನಟರಾದ ಉದಯ್ ಮತ್ತು ಅನಿಲ್ ಶ್ರಾದ್ಧ ಸಾವಿಗೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡರನ್ನು ಬಂಧಿಸಲು ಪೊಲೀಸರು ಮುಂದಾದಾಗ ಅವರ ಜತೆ ನಟ ದುನಿಯಾ ವಿಜಯ್ ಅನುಚಿತವಾಗಿ ವರ್ತಿಸಿದ್ದರು ಎಂಬ ಮಾಹಿತಿ ಇದೆ, ಹಾಗೂ ಆರೋಪಿ ನಿರ್ಮಾಪಕ ಸುಂದರ್ ಪಿ ತಪ್ಪಿಸಿಕೊಳ್ಳಲು ಸಹಾಯ ಮಾಡಿದರು ಎಂದು ವಿಜಯ್ ಮೇಲೆ ಆರೋಪ ಹೊರಿಸಲಾಗಿದ್ದು ಈ ಬಗ್ಗೆ ಎಫ್ ಐ ಆರ್ ದಾಖಲಾಗಿದೆ .

ಇದೇ ವಿಚಾರವಾಗಿ ತಾವರಕೆರೆ ಪೊಲೀಸರು ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಅನುಚಿತ ವರ್ತನೆ ಆರೋಪದಲ್ಲಿ ದುನಿಯಾ ವಿಜಯ್ ವಿರುದ್ಧ ದೂರು ದಾಖಲಿಸಿದ್ದಾರೆ. /// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ತಪ್ಪದೇ ಕ್ಲಿಕ್ಕಿಸಿ –    Karnataka Crime News