ಮತ ಎಣಿಕೆ ಆರಂಭ-ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ

35

Politics ( itskannada ) ಬೆಂಗಳೂರು: ಮತ ಎಣಿಕೆ ಆರಂಭ-ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ –ರಾಜ್ಯದಲ್ಲಿ ಅದಾಗಲೇ ಅಂಚೆ ಮತಗಳ ಎಣಿಕೆ ಕಾರ್ಯ ಶುರುವಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, 38 ಕೇಂದ್ರಗಳಲ್ಲಿ 222 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಲೆಕ್ಕಾಚಾರ ಏಕಕಾಲಕ್ಕೆ ಆರಂಭಗೊಂಡಿದೆ. 

ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಬಹುತೇಕ ಎಲ್ಲಾ ಕ್ಷೇತ್ರಗಳ ಸ್ಪಷ್ಟ ಚಿತ್ರಣ ಹೊರ ಬೀಳಲಿದ್ದು, ವಿವಿಪ್ಯಾಟ್‌ ಅಳವಡಿಕೆ ಹಿನ್ನೆಲೆಯಲ್ಲಿ ಈ ಬಾರಿ ಅಧಿಕೃತ ಫಲಿತಾಂಶ ಪ್ರಕಟವಾಗುವುದಕ್ಕೆ ತುಸು ವಿಳಂಬವಾಗಲಿದೆ. ಒಟ್ಟು 16,662 ಸಿಬ್ಬಂದಿಯನ್ನು, 3410 ಮೇಲ್ವಿಚಾರಕರನ್ನು , 888 ಸಿಬ್ಬಂದಿಯನ್ನು ಅಂಚೆ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿದೆ, 14 ಸುತ್ತಿನಲ್ಲಿ 217 ಕ್ಷೇತ್ರಗಳು ಹಾಗೂ 5 ಕ್ಷೇತ್ರಗಳ ಎಣಿಕೆ ಕಾರ್ಯ 21 ಸುತ್ತಿನಲ್ಲಿ ನಡೆಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. //// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ Karnataka Politics News

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2018 – Karnataka Assembly Result 2018


ತ್ವರಿತ ಕನ್ನಡ ಸುದ್ದಿ ಹಾಗೂ ಕ್ಷಣಕ್ಷಣದ ಕನ್ನಡ ನ್ಯೂಸ್ ಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ

Stay Updated with itsKannada, to know more Latest Kannada News - Read Kannada News Today Updates Kannada News Online - Get Latest News Headlines Breaking News in Kannada


.
error: Content is protected !!