2019ರ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಬರದ ಸಿದ್ಧತೆ

Kannada News (itskannada) Politics  ಬೆಂಗಳೂರು -2019ರ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಬರದ ಸಿದ್ಧತೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರದ ಕಾರಣ ಸರ್ಕಾರ ರಚಿಸಲು ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಮಾತ್ರ ಬರುವ ಲೋಕಸಭಾ ಚುನಾವಣೆಯ ಕಡೆಗೆ ಗಮನಹರಿಸುವ ಮೂಲಕ ಮೈತ್ರಿ ಪಕ್ಷಗಳಿಗೆ ಶಾಕ್ ನೀಡಲಿದೆ.

 ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ವಿದಾಯ ಭಾಷಣ ಮಾಡುವ ಸಂದರ್ಭದಲ್ಲಿ ನಾವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ಗೆದ್ದು ಕೇಂದ್ರದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತೋರುತ್ತೇವೆ ಎಂದು ಗುಡುಗಿದ್ದರು. ಅದರಂತೆಯೇ ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳನ್ನು ಮುಂದೆ ಇಟ್ಟುಕೊಂಡು ಬೈಕ್ ರಾಲಿ ಮಾಡುವ ಮೂಲಕ ಜನರಿಗೆ ಮನವರಿಕೆ ಮಾಡಲು ಮುಂದಾಗಿದೆ.
ರಾಜ್ಯದಾದ್ಯಂತ ಜೂನ್ 15 ರಿಂದ 20 ರವರೆಗೆ ಯುವ ಮೋರ್ಚಾ ದಿಂದ 5 ದಿನಗಳ ಕಾಲ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ ಬೈಕ್ Rally ಮಾಡಲು ಮಾಜಿ ಸಿಎಂ ಬಿಎಸ್ ಸೂಚಿಸಿದರು. ಅದರಂತೆಯೇ ಸಂಸದರು, ಶಾಸಕರು,ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಸೂಚಿಸಿದ್ದಾರೆ. /// Karnataka Politics News – Karnataka News