ನಕಲಿ ವೋಟರ್ ಐಡಿ-ನನಗೇನೂ ಗೊತ್ತಿಲ್ಲ ಎಂದ ಸಿಎಂ

Politics (itskannada)ಬೆಂಗಳೂರು: ನಕಲಿ ವೋಟರ್ ಐಡಿಗಳು ಪತ್ತೆಯಾಗಿರುವ ಕುರಿತಂತೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರಾಕರಿಸಿದ್ದು, ಈ ಬಗ್ಗೆ ತಮಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಈ ವಿಷಯದ ಬಗ್ಗೆ ನನಗೇನೂ ಗೊತ್ತಿಲ್ಲ. ಚುನಾವಣಾ ಆಯೋಗ ನೋಡಿಕೊಳ್ಳುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಭಾರತೀಯ ಜನತಾಪಕ್ಷವು ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಿದ್ಧರಾಮಯ್ಯ ಬೆಳಗ್ಗೆಯಷ್ಟೇ ಹೇಳಿದ್ದರು. /// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ – Karnataka Politics News