ನಾಳೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ

H D Kumaraswamy will take oath as 25th chief minister of Karnataka

Politics (itskannada) ಬೆಂಗಳೂರು: ನಾಳೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ-H D Kumaraswamy will take oath as 25th chief minister of Karnatakaನಿಯೋಜಿತ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅದಾಗಲೇ ಬೃಹತ್‌ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಮೇ 23 ರ ಸಂಜೆ 4.30ಕ್ಕೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದು, ದೇಶದ ನಾನಾ ಗಣ್ಯರಿಗಾಗಿ ವೇದಿಕೆ ಸಿದ್ದಗೊಳಿಸಲಾಗುತ್ತಿದೆ. ರಾಜಕೀಯ ಗಣ್ಯರೂ ಸೇರಿದಂತೆ ಸಿನಿಮಾ ನಟರು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಲಕ್ಷ್ಮಿನಾರಾಯಣ, ಡಿಪಿಎಆರ್‌ ಜಾವೇದ್‌ ಅಖ್ತರ್‌ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.ಕಾರ‍್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರಿಂದ ಈ ಮೊದಲು ನಿಗದಿ ಪಡಿಸಿದ್ದ ಕಂಠೀರವ ಕ್ರೀಡಾಂಗಣದ ಬದಲು ವಿಧಾನಸೌಧದ ಮೆಟ್ಟಿಲುಗಳ ಮೇಲೆಯೇ ಪ್ರಮಾಣ ವಚನ ಸಮಾರಂಭ ನಡೆಸಲು ನಿರ್ಧರಿಸಲಾಗಿದೆ.
ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಬೆಳಗ್ಗೆ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. \\\ ಈ ವಿಭಾಗದ ಇನ್ನಷ್ಟು ಸುದ್ದಿಗಳಿಗಾಗಿ ತಪ್ಪದೇ ಕ್ಲಿಕ್ಕಿಸಿ – Karnataka Politics News-Kannada News