ಇಷ್ಟೇ ದಿನ ಸರ್ಕಾರ ಇರುತ್ತೆ ಅಂತ ಹೇಳಲ್ಲ- ರೇವಣ್ಣ

Kannada News (itskannada) Politics ಹಾಸನ: ಇಷ್ಟೇ ದಿನ ಸರ್ಕಾರ ಇರುತ್ತೆ ಅಂತ ಹೇಳಲ್ಲ- ರೇವಣ್ಣ : ಸಮ್ಮಿಶ್ರ ಸರ್ಕಾರ ಇಷ್ಟೇ ದಿನ ಇರುತ್ತೆ ಎಂದು ಹೇಳಲು ಸಾಧ್ಯವಿಲ್ಲ ಎಂದು ರಾಜ್ಯ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅನುಮಾನ ವ್ಯಕ್ತಪಡಿಸಿದ್ದಾರೆ.

ಇಷ್ಟೇ ದಿನ ಸರ್ಕಾರ ಇರುತ್ತೆ ಅಂತ ಹೇಳಲ್ಲ- ರೇವಣ್ಣ

ಸಚಿವ ಸ್ಥಾನ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದ ರೇವಣ್ಣ ಅವರು ಬೇಲೂರಿನ ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಇಷ್ಟೇ ದಿನ ಸರ್ಕಾರ ಇರುತ್ತೆ ಎಂದು ನಾನು ಹೇಳುವುದಿಲ್ಲ. ಇದ್ದಷ್ಟು ದಿನ ಅಭಿವೃದ್ಧಿ ಕೆಲಸ ಮಾಡುವೆ. ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಹೇಳುವ ಮೂಲಕ ಪೂರ್ಣವಧಿ ಸರ್ಕಾರದ ಕುರಿತು ಪರೋಕ್ಷವಾಗಿ ಸಂದೇಹದ ಮಾತುಗಳನ್ನಾಡಿದರು.
ಹಾಸನ ಜಿಲ್ಲೆಯ ಜನರು 7 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಪಕ್ಷಕ್ಕೆ ಮತ ನೀಡಿ ಬೆಂಬಲ ನೀಡಿದ ಮತದಾರರಿಗೆ ಧನ್ಯವಾದ. ಕಳೆದ 10 ವರ್ಷಗಳಿಂದ ಜಿಲ್ಲೆಯಲ್ಲಿ ಉಂಟಾದ ಸಂಕಷ್ಟ ಪರಿಸ್ಥಿತಿಯನ್ನು ಬದಲಾವಣೆ ತಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತೇನೆ. ಇದೇ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ತಾಕತ್ತಿದ್ದರೆ ರೈತರ ಸಾಲಮನ್ನಾ ಮಾಡಲಿ. ನಾಲ್ಕು ವರ್ಷದ ಅವಧಿಯಲ್ಲಿ ರೈತರಿಗೆ ಯಾವ ಸವಲತ್ತು ನೀಡಿದೆ ಎಂಬುದನ್ನು ರಾಜ್ಯ ಬಿಜೆಪಿ ನಾಯಕರು ತಿಳಿಸಲಿ ಎಂದು ಸವಾಲು ಎಸೆದರು.
ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷದಲ್ಲೂ ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತವಾಗಿದೆ. ಜೆಡಿಎಸ್ ಸಚಿವರಾದ ಸಿಎಸ್ ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಹಾಗೂ ಡಿಸಿ ತಮ್ಮಣ್ಣ ಅವರಿಗೆ ಸಾರಿಗೆ ಖಾತೆ ನೀಡಿದ್ದರಿಂದ ಹಲವು ಕಾರ್ಯಕರ್ತರು ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಉಳಿದಂತೆ ಉನ್ನತ ಶಿಕ್ಷಣ ಖಾತೆ ಪಡೆದಿರುವ ಜಿ.ಟಿ. ದೇವೇಗೌಡ ಅವರ ಖಾತೆಯ ಬಗ್ಗೆ ಪುನರ್ ವಿಮರ್ಶೆ ಮಾಡಬೇಕು ಎಂದು ಜೆಡಿಎಸ್ ಶಾಸಕ ವಿಶ್ವನಾಥ್ ಸಿಎಂ ಬಳಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಕ್ಷೇತ್ರದ ಕಾರ್ಯಕರ್ತರು ಸಹ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸುವುದಾಗಿ ಜಿಟಿಡಿ ಸ್ಪಷ್ಟನೆ ನೀಡಿದ್ದಾರೆ. //// Karnataka Politics News – Kannada Politics News