ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ಖಡಕ್ ಎಚ್ಚರಿಕೆ..!

Kannada News (itskannada) Politics : ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ಖಡಕ್ ಎಚ್ಚರಿಕೆ..!

ಬೆಂಗಳೂರು – ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಹಂಚಿಕೆಯ ವಿಚಾರವಾಗಿ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ.
   ಬಿಜೆಪಿ ನಾಯಕರು, ಸಚಿವ ಸ್ಥಾನ ವಂಚಿತ ಅತ್ರುಪ್ತ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುತ್ತಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸ ಬೇಡಿ ತಟಸ್ಥ ವಾಗಿದ್ದು ಬರುವ ಲೋಕಸಭಾ ಚುನಾವಣೆಯ ಕಡೆಗೆ ಗಮನಹರಿಸಿ.
   ನೀವೆನಾದರೂ ಕೈ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದರೆ ಬಿಜೆಪಿ ಮತ್ತೊಮ್ಮೆ ಆಪರೇಷನ್ ಕಮಲಕ್ಕೆ ಕೈ ಹಾಕುತ್ತಿದ್ದಾರೆ ಎನ್ನುವ ಕಲ್ಪನೆ ಜನರಲ್ಲಿ ಮೂಡುತ್ತದೆ. ಅವರಷ್ಟಕ್ಕೇ ಅವರನ್ನು ಬಿಟ್ಟು ಬಿಡಿ ಅವರಾಗಿಯೆ ನಮ್ಮ ಹತ್ತಿರ ಬಂದರೆ ವಿಚಾರ ಮಾಡೋಣ. ಜೊತೆಗೆ ಚುನಾವಣಾ ಪೂರ್ವದಲ್ಲಿ ಮೈತ್ರಿ ಪಕ್ಷಗಳು ಹೇಳಿದ ರೈತರ ಸಾಲ ಮನ್ನಾ ವಿಚಾರವಾಗಿ ಹೋರಾಟ ಮಾಡಿ  ಎಂದು ಹೈಕಮಾಂಡ್  ಎಚ್ಚರಿಕೆ ನೀಡಿದೆ. ////

ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ – Karnataka Politics News – Karnataka News – Kannada Politics News