ಆರ್.ಆರ್ ನಗರ-ಪಕ್ಷೇತರ ಅಭ್ಯರ್ಥಿ ಹುಚ್ಚ ವೆಂಕಟ್ ಗೆ ಕೇವಲ 72 ಮತ

Politics (itskannada) ಬೆಂಗಳೂರು: ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ಬಾರಿ ಟಿಕೆಗೊಳಗಾಗಿದ್ದ ಆರ್‌.ಆರ್‌ ನಗರ ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿತ್ತು. ಇಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಆರ್‌.ಆರ್‌ ನಗರದ ಹಲಗೆವಡೇರಹಳ್ಳಿಯ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಚುನಾವಣಾಧಿಕಾರಿಗಳು ಬೆಳಗ್ಗೆ 8 ಗಂಟೆಗೆ ಸರಿಯಾಗಿ ಸ್ಟ್ರಾಂಗ್‌ ರೂಂ ತೆರೆದಿದ್ದು, ಮತ ಎಣಿಕೆ ಕಾರ್ಯ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಅಭ್ಯರ್ಥಿಗಳು, ಪಕ್ಷಗಳ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಫಲಿತಾಂಶಕ್ಕಾಗಿ    ಎದುರುನೋಡುತ್ತಿದ್ದಾರೆ.

ಪ್ರಾರಂಭ ಎಣಿಕೆಯಲ್ಲಿ ಪಕ್ಷೇತರ ಹುಚ್ಚ ವೆಂಕಟ್ ಕೇವಲ 72 ಮತ ಪಡೆದು ಬಾರಿ ಹಿನ್ನೆಡೆ ಅನುಭವಿಸುತ್ತಿದ್ದಾರೆ. ಮೊದಲ ಸುತ್ತಿನಲ್ಲೇ ಮಣಿರತ್ನಂ ಬಾರಿ ಮತಳಿಂದ ಮುನ್ನುಗ್ಗಿದ್ದಾರೆ. /// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ತಪ್ಪದೆ ಕ್ಲಿಕ್ಕಿಸಿ- Karnataka Politics News