ಮೈಸೂರು-ತಮ್ಮ ಮತ ಚಲಾಯಿಸಿದ ಸಿದ್ದರಾಮಯ್ಯ

siddaramaiah voted in siddaramanahundi

23

Politics (itskannada) ಮೈಸೂರು-ತಮ್ಮ ಮತ ಚಲಾಯಿಸಿದ ಸಿದ್ದರಾಮಯ್ಯsiddaramaiah voted in siddaramanahundi ಚುನಾವಣೆಯ ಮತದಾನ ಬಾರಿ ಬಿರಿಸಿನಿಂದ ನಡೆಯುತ್ತಿದೆ ಅದಾಗಲೇ ಶೇಕಡ ೩೦ ರಷ್ಟು ಮತದಾನವಾಗಿದೆ. ಕ್ಷೇತ್ರದ ಹಲವು ಅಭ್ಯರ್ಥಿಗಳು ಈಗಾಗಲೇ ಮತ ಚಲಾಯಿಸಿದ್ದಾರೆ.  ಸಿದ್ದರಾಮನಹುಂಡಿಗೆ ಆಗಮಿಸಿದ ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ದೇವರಾದ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ಜೊತೆಗೆ ವರುಣ ಕ್ಷೇತ್ರದ ಅಭ್ಯರ್ಥಿ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡ ಮತದಾನ ಮಾಡಿದರು.

ಮತದಾನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು  ನಾವು ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾವನ್ನು ವ್ಯಕ್ತಪಡಿಸಿದ್ದಾರೆ. ಜನರ ವಿಶ್ವಾಸ ಹಾಗೂ ಬೆಂಬಲ ನಮ್ಮ ಪಕ್ಷಕ್ಕಿದೆ ಎಂದಿದ್ದಾರೆ. //// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ತಪ್ಪದೇ ಕ್ಲಿಕ್ಕಿಸಿ – Karnataka Politics News – Kannada News – Mysore News Online

Open

error: Content is protected !!