ಅಮಿತ್ ಶಾ,ಪ್ರಧಾನಿ ಮೋದಿಗೆ ಲೀಗಲ್ ನೋಟಿಸ್

Siddaramaih Sends Legal Notice To BJP Leaders

148

Politics (itskannada) ಬೆಂಗಳೂರು: ಅಮಿತ್ ಶಾ,ಪ್ರಧಾನಿ ಮೋದಿಗೆ ಲೀಗಲ್ ನೋಟಿಸ್-Siddaramaih Sends Legal Notice To BJP Leaders : ವಿಜಯ್ ಈಶ್ವರನ್ ಎಂಬ ಉದ್ಯಮಿ ಜತೆ ಸಿದ್ದರಾಮಯ್ಯ ಅಕ್ರಮನಡೆಸಿದ್ದಾರೆ , ಅವರ ಜೊತೆ ಒಪ್ಪಂದ ನಡೆಸಿ ಬದಲಾಗಿ ದುಬಾರಿ ವಾಚನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು.

ಅಲ್ಲದೆ , ತೆರಿಗೆ ವಂಚನೆ ಮಾಡಿ ಜಾರಿ ನಿರ್ದೇಶನಾಲಯದಿಂದ ಪ್ರಕರಣ ದಾಖಲಿಸಿಕೊಂಡಿರುವ ಉದ್ಯಮಿಯೊಬ್ಬರೊಂದಿಗೆ ಸಂಬಂಧವಿದೆ ಎಂದು ಆರೋಪ ಮಾಡಿರುವ ಅಮಿತ್ ಶಾ,ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮಾನನಷ್ಟ ಮೊಕದ್ದಮೆ ಹೂಡಲು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲವಾದರೆ 100 ಕೋಟಿ ರೂ, ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಲೀಗಲ್‌ ನೋಟಿಸ್‌ ಕೊಟ್ಟಿದ್ದಾರೆ.

ಬಿಜೆಪಿ ನಾಯಕರು ವಿಜಯ್ ಮಲ್ಯ, ನೀರವ್ ಮೋದಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ರೂ ತೆರಿಗೆ ವಂಚನೆ ಮಾಡಿ ತಲೆಮರೆಸಿಕೊಳ್ಳಲು ಪರೋಕ್ಷವಾಗಿ ಅವಕಾಶ ನೀಡಿದ್ದಾರೆ ಎಂದು  ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ತಿರುಗೇಟು ನೀಡಿದ್ದಾರೆ. // ಈ   ವಿಭಾಗದ ಇನ್ನಷ್ಟು ಸುದ್ದಿಗಳಿಗಾಗಿ ಕ್ಲಿಕ್ಕಿಸಿ – Karnataka Politics News – Kannada News – Karnataka News

Summary
Siddaramaih Sends Legal Notice To BJP Leaders
Article Name
Siddaramaih Sends Legal Notice To BJP Leaders
Description
Siddaramaih Sends Legal Notice To BJP Leaders
Author
Publisher Name
itskannada
Publisher Logo
Open

error: Content is protected !!