ಸಿ.ಎಂ.ವಿರುದ್ಧ ಜೆಡಿಎಸ್‌ ಅಭ್ಯರ್ಥಿ ಜಿ ಟಿ ದೇವೇಗೌಡ ನೀತಿ ಸಂಹಿತೆ ಉಲ್ಲಂಘನೆ ದೂರು

Violation Complaint Against Siddaramaiah

39

Politics (itskannada) ಬೆಂಗಳೂರು:  ಮೇ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ದೂರು ನೀಡಿದ್ದೇವೆ  ಎಂದು ಚಾಮುಂಡೇಶ್ವರಿ ಜೆಡಿಎಸ್‌ ಅಭ್ಯರ್ಥಿ ಜಿ ಟಿ ದೇವೇಗೌಡ ತಿಳಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ  ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿನ ಬೂತ್‌ನಲ್ಲಿ ಮತಚಲಾಯಿಸಿ ಮಾತನಾಡಿದ ಅವರು, ಉನ್ನತ ಹುದ್ದೆಯಲ್ಲಿರುವ ಮುಖ್ಯಮಂತ್ರಿಗಳು ನೀತಿ ಸಂಹಿತೆ ಬಗ್ಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮನೆ ಮನೆಗೆ ತೆರಳಿ ಪ್ರಚಾರ ನಡೆಸುವಾಗ ಕೇವಲ 10 ಮಂದಿ ಮಾತ್ರ ಜತೆಯಲ್ಲಿರುವಂತೆ ಕಟ್ಟುನಿಟ್ಟಿನ ಆದೇಶವಿದ್ದರೂ ಸಿದ್ದರಾಮಯ್ಯ ಅವರು ತಮ್ಮೊಂದಿಗೆ 100  ರಿಂದ 200 ಮಂದಿಯನ್ನು ಕರೆದುಕೊಂಡು ಹೋಗಿ ಪ್ರಚಾರ ಮಾಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿರುವ ಅವರ ವಿರುದ್ಧ  ದೂರು ನೀಡಿದ್ದೇವೆ ಎಂದರು.//// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ – Karnataka Politics News – Kannada News –Karnataka News

Open

error: Content is protected !!