ಮಲೆನಾಡಿನಲ್ಲಿ ಭಾರಿ ಮಳೆ : ಕಾವೇರಿ ನದಿಯ ನೀರಿನ ಪ್ರಮಾಣ ಹೆಚ್ಚಳ

Kannada News (itskannada) Kodagu : ಮಲೆನಾಡಿನಲ್ಲಿ ಭಾರಿ ಮಳೆ : ಕಾವೇರಿ ನದಿಯ ನೀರಿನ ಪ್ರಮಾಣ ಹೆಚ್ಚಳ : ಕೊಡಗು :  ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಗುರುವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ಕಣಿವೆಯ ಜನತೆಯಲ್ಲಿ ಹರ್ಷ ತಂದಿದೆ. ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದೆ.

ಮಲೆನಾಡಿನಲ್ಲಿ ಭಾರಿ ಮಳೆ : ಕಾವೇರಿ ನದಿಯ ನೀರಿನ ಪ್ರಮಾಣ ಹೆಚ್ಚಳ

ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, ಕಾವೇರಿ ಉಕ್ಕಿ ಹರಿಯಲಾರಂಭಿಸಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ. ಇದೇ ರೀತಿ ಮಳೆ ಸುರಿದಲ್ಲಿ ಭಾಗಮಂಡಲದಲ್ಲಿ ಪ್ರವಾಹ ಎದುರಾಗಲಿದೆ ಎಂದು ಸ್ಥಳೀಯರಾದ ಕಾಳನ ರವಿ ವಿಜಯವಾಣಿಗೆ ಮಾಹಿತಿ ನೀಡಿದ್ದಾರೆ. 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 64.40 ಮಿ.ಮೀ. ಮಳೆಯಾಗಿದೆ.

ಇನ್ನು ಕೊಡಗು ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಕಾವೇರಿ ನದಿಗೆ ಒಳಹರಿವು ಹೆಚ್ಚಾಗಿದ್ದು  ಕೃಷ್ಣ ರಾಜ ಸಾಗರ ಡ್ಯಾಮ್ ನ ನೀರಿನ ಮಟ್ಟ ಹೆಚ್ಚಾಗಿದ್ದು ರೈತರಲ್ಲಿ ಸಂತಸ ಮೂಡಿದೆ. /// Kodagu News Online