ಪ್ರಧಾನಿ ಭ್ರಷ್ಟರನ್ನು ಜೊತೆಗಿಟ್ಟುಕೊಂಡಿದ್ದಾರೆ-ರಾಹುಲ್ ಗಾಂಧಿ

37

Bidar-Politics (itskannada) ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು.ಜೈಲಿಗೆ ಹೋಗಿ ಬಂದಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಿದ್ದಾರೆ. ಗಣಿ ಹಗರಣ ನಡೆಸಿರುವ ರೆಡ್ಡಿ ಸಹೋದರರನ್ನು ಎದುರಿನಲ್ಲಿಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಬಸವಣ್ಣನವರು ನುಡಿದಂತೆ ನಡೆಯಿರಿ ಎಂದು ಹೇಳಿದ್ದಾರೆ. ಮೋದಿ ಅವರು ನುಡಿದಂತೆ ನಡೆಯಲಿ ಎಂದು ರಾಹುಲ್ ಹೇಳಿದರು.

ಮೋದಿ ಅವರು ಅಂಬೇಡ್ಕರ್ ಬಗ್ಗೆ ಮಾತನಾಡುತ್ತಾರೆ. ಆದರೆ ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ನಲ್ಲಿ ದಲಿತರ ಹತ್ಯೆಯಾಗುತ್ತಿದ್ದರೂ ಇದರ ಬಗ್ಗೆ ಅವರು ಮಾತನಾಡುವುದಿಲ್ಲ ಎಂದು ರಾಹುಲ್ ತಿಳಿಸಿದರು.

ಮಹಿಳೆಯರ ಮೇಲಿನ ದೌರ್ಜನ್ಯ, ಭ್ರಷ್ಟಾಚಾರ ಬಗ್ಗೆ ಮಾತನಾಡಲ್ಲ, ಮಾತೆತ್ತಿದರೆ ಕಾಂಗ್ರೆಸ್ ಬಗ್ಗೆ ಟೀಕೆ ಮಾಡುತ್ತಾ ಇರುವುದು ಅವರ ಕೆಲಸ ಎಂದಿದ್ದಾರೆ. \\ ಈ ವಿಭಾಗದ ಇನ್ನಷ್ಟು ಸುದ್ದಿಗಳನ್ನು ಓದಲು ತಪ್ಪದೇ ಕ್ಲಿಕ್ಕಿಸಿ – Karnataka Politics News – Kannada News – Karnataka News –  Bidar News Online

Open

error: Content is protected !!