ಬಾದಾಮಿಯಲ್ಲಿ ಬಿಜೆಪಿ ಪಕ್ಷಕ್ಕೆ ಉತ್ತಮ ಜನಬೆಂಬಲವಿದೆ-ಶ್ರೀರಾಮುಲು

Politics : ( itskannada ) ಬಿ.ಜೆ.ಪಿ ಪಕ್ಷದ ಮೇಲೆ ಜನರಿಗೆ ನಂಬಿಕೆ ಇದೆ, ಈ ಬಾರಿ ಗೆಲುವು ಖಂಡಿತಾ ನಮ್ಮ ಪಕ್ಷಕ್ಕೆ ಎಂದಿದ್ದಾರೆ  ಶ್ರೀರಾಮುಲು. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಎಲ್ಲೆಡೆ ಸುದ್ದಿ ಹರಡಿತ್ತು. ಜನಾರ್ದನ ರೆಡ್ಡಿಯವರ ಆಪ್ತ ಶ್ರೀರಾಮುಲು ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ನನ್ನ ಮೇಲಿರುವ ಗೆಳೆತನ, ಸ್ನೇಹದ ಕಾರಣದಿಂದ ಜನಾರ್ದನ ರೆಡ್ಡಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೇ, ಅವರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮುಲು, ಬಾದಾಮಿಯಲ್ಲಿ ಬಿಜೆಪಿ ಪಕ್ಷಕ್ಕೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ನಾನು ಎರಡೂ ಕ್ಷೇತ್ರಗಳಲ್ಲೂ ಗೆದ್ದು ತೋರಿಸುತ್ತೇನೆ. ಸಿದ್ದರಾಮಯ್ಯ ಹಿಂದೂ ಧರ್ಮವನ್ನು ಲಿಂಗಾಯತ ಪ್ರಕರಣದಲ್ಲಿ ಒಡೆದು ಹಾಕಿದ ವಿಷಯ ಎಲ್ಲರಿಗೂ ತಿಳಿದಿದೆ. ನಾನು ಸಿಎಂ ಸಿದ್ದರಾಮಯ್ಯ ಮಾಡಿರುವ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಮುಮದಿಟ್ಟುಕೊಂಡು ಮತ ಯಾಚನೆ ಮಾಡುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ. //

ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ –  Badami News Kannada – Kannada News – Karnataka News – Karnataka Politics-Karnataka Crime News