ಸರ್ಕಾರ ರೈತ ವಿರೋಧಿ ಧೋರಣೆ ತೋರುತ್ತಿದೆ-ಮಾಜಿ ಸಿಎಂ ಕುಮಾರಸ್ವಾಮಿ

17

Politics : (itskannada) ಕೊಪ್ಪ : ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ತೋರುತ್ತಿದೆ. ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಯಾವುದೇ ಕೆಲಸ ಮಾಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೊಪ್ಪದಲ್ಲಿ ಕುಮಾರಸ್ವಾಮಿ ಚುನಾವಣಾ ಭಾಷಣ ಮಾಡಿದರು. ‘ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ. ಸಹಕಾರಿ ಬ್ಯಾಂಕ್ ಸಾಲ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಇದುವರೆಗೆ ಬ್ಯಾಂಕ್ ಖಾತೆಗೆ ಹಣ ಪಾವತಿ ಮಾಡಿಲ್ಲ ಎಂದು ಆರೋಪಿಸಿದರು.

ಕಳೆದ 5 ವರ್ಷದಲ್ಲಿ ಸಿದ್ದರಾಮಯ್ಯ ಸರ್ಕಾರ ಒಂದೂವರೆ ಕೋಟಿ ಲಕ್ಷ ಸಾಲ ಮಾಡಿದೆ. ಆ ಸಾಲ ತೀರಿಸುವ ಹೊಣೆಯನ್ನು ಸಿದ್ದರಾಮಯ್ಯ ರಾಜ್ಯದ ಜನರ ಮೇಲೆ ಹಾಕಿದ್ದಾರೆ. ನಾನು ಸಿಎಂ ಆಗಿದ್ದಾಗ ಸಾಲ ಮನ್ನಾ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳ್ತಿದ್ದಾರಲ್ಲಾ..ಅವರಿಗೆ ಎಲ್ಲೋ ನೆನಪಿನ ಶಕ್ತಿ ಕಡಿಮೆಯಾಗಿರಬೇಕು ಎಂದು ಹೇಳಿದ್ದಾರೆ.

ರೈತರು ತೊಂದರೆಯಲ್ಲಿದ್ದಾರೆ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿದರು. // ಈ ವಿಭಾಗದ ಇನ್ನಷ್ಟು ಸುದ್ದಿಗಳಿಗಾಗಿ ಕ್ಲಿಕ್ಕಿಸಿ Karnataka Crime News -Kannada News

Open

error: Content is protected !!