ಇಂದು ಮತ್ತು ನಾಳೆ ಭಾರಿ ಮಳೆ-ಹವಾಮಾನ ಇಲಾಖೆ | ಕನ್ನಡ ನ್ಯೂಸ್

Kannada News (itskannada)  ಬೆಂಗಳೂರು : ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಹೈಅಲರ್ಟ್ ಘೋಷಣೆ ಮಾಡಿದೆ.

ಇಂದು ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಮಂಗಳೂರು, ಉಡುಪಿ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇನ್ನು ಉ. ಕನ್ನಡ, ವಿಜಯಪುರ, ಕಲ್ಬುರ್ಗಿ,  ಬೀದರ್, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ////