ಕರಾವಳಿಯಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

Kannada News (itskannada) : ಕರಾವಳಿಯಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ : ಮೇ 29ರಂದು ರಾಜ್ಯದ ಕರಾವಳಿ ಭಾಗ ಪ್ರವೇಶಿಸಿದ್ದ ಮುಂಗಾರು, ಶುಕ್ರವಾರದ ವೇಳೆಗೆ ಇಡೀ ರಾಜ್ಯವನ್ನು ಆವರಿಸಿದೆ.

ಕರಾವಳಿಯಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ, ನೇತ್ರಾವತಿ, ಕುಮಾರಧಾರಾ, ಭದ್ರಾ ನದಿಗಳು ಮೈದುಂಬಿ ಹರಿಯಲಾರಂಭಿಸಿವೆ. ಶರಾವತಿ ಕಣಿವೆಯಲ್ಲಿ ಉತ್ತಮ ಮಳೆಯಾಗಿದ್ದು, ಜಗದ್ವಿಖ್ಯಾತ ಜೋಗ ಜಲಪಾತ ಕಳೆಗಟ್ಟಿದೆ.

ಕರಾವಳಿ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂಗಾರು ತೀವ್ರತೆ ಪಡೆದಿದ್ದು, ಜೂ.11ರವರೆಗೂ ಮಳೆಯಬ್ಬರ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಹಾರಾಷ್ಟ್ರದಿಂದ ಕೇರಳದವರೆಗೆ ಕರಾವಳಿ ಭಾಗದಲ್ಲಿ ದಟ್ಟ ಮೋಡಗಳ ಸಾಲು ನಿರ್ವಣವಾಗಿ ಮುಂಗಾರು ಮತ್ತಷ್ಟು ಚುರುಕಾಗುವಂತೆ ಮಾಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಮತ್ತು ದಕ್ಷಿಣ ಒಳನಾಡಿನ ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆಯಿದ್ದು, ಉಳಿದಂತೆ ಬೆಂಗಳೂರು ನಗರ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಅಥವಾ ಸಾಧಾರಣ ಮಳೆಯಾಗಲಿದೆ. ////