ಮಂಗಳೂರಿನಲ್ಲಿಂದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

18

Mangalore : ( itskannada) ಮಂಗಳೂರು : ಮುಂಬರುವ ಚುನಾವಣೆಗೆ ಕಾಂಗ್ರೆಸ್ ಅತೀ ಜತನದಿಂದ ತಯಾರಿಸಿರುವ ಚುನಾವಣಾ ಪ್ರಣಾಳಿಕೆ ಇಂದು ಮಂಗಳೂರಿನಲ್ಲಿ ಬಿಡುಗಡೆಯಾಗಲಿದೆ.ಮಂಗಳೂರಿನ ಟಿ.ಎಂ.ಎ ಪೈ ಕನ್ವೆನ್ಷನ್ ಹಾಲ್ ನಲ್ಲಿ‌ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಪ್ರಣಾಳಿಕೆಯನ್ನು‌ ಬಿಡುಗಡೆ ಮಾಡಲಿದ್ದಾರೆ.

ಈ ಕುರಿತು ಗುರುವಾರ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ.ಎಂ. ವೀರಪ್ಪ ಮೊಯ್ಲಿ, “ಈವರೆಗೆ ರಾಜಕೀಯ ಇತಿಹಾಸದಲ್ಲಿ ಯಾವ ರಾಜಕೀಯ ಪಕ್ಷವೂ ಬಿಡುಗಡೆಗೊಳಿಸದ ರೀತಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದೇವೆ,” ಎಂದು ಹೇಳಿದರು. \\ Mangalore News Online – Kannada News

Open

error: Content is protected !!