ವಿನಾಯಕ ಬಾಳಿಗ ಸಹೋದರಿಯಿಂದ ಅಮಿತ್ ಶಾ ಗೆ ಪತ್ರ

33

Mangalore (itskannada): ಮಂಗಳೂರಿನ ಬಿಜೆಪಿ ಕಾರ್ಯಕರ್ತನಾಗಿದ್ದ ನನ್ನ ಸಹೋದರ ವಿನಾಯಕ ಬಾಳಿಗನನ್ನು ಯಾರು ಹತ್ಯೆ ಮಾಡಿದ್ದಾರೆ ಮತ್ತು ಯಾತಕ್ಕಾಗಿ ಹತ್ಯೆ ಮಾಡಿದ್ದಾರೆ ಎಂದು ಬಾಳಿಗಾ ಸಹೋದರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿನಾಯಕ ಬಾಳಿಗ ಸಹೋದರಿ ಅನುರಾಧ ಬಾಳಿಗ, ಪ್ರಕರಣದಲ್ಲಿ ನರೇಶ್ ಶೆಣೈ ಪ್ರಮುಖ ಆರೋಪಿಯಾಗಿದ್ದು, ಶೆಣೈವರೆಗೆ ಮಾತ್ರ ತನಿಖೆ ನಡೆದಿದೆ. ಈ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ತನಿಖೆ ನಡೆಸಬೇಕಿದೆ. ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಕಾರ್ಯಕರ್ತ ಕೊಲೆ ವಿಚಾರವನ್ನು ಪ್ರಸ್ತಾಪ ಮಾಡುತ್ತಿರುವ ಬಿಜೆಪಿ, ವಿನಾಯಕ ಬಾಳಿಗ ಕೊಲೆ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ವಿನಾಯಕ ಬಾಳಿಗ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದರೂ ಅವರ ಹತ್ಯೆ ವಿಚಾರದಲ್ಲಿ ಪಕ್ಷ ಪ್ರತಿಭಟನೆ ನಡೆಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಬಾಳಿಗಾ ಹತ್ಯೆ ಪ್ರಕರಣದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಿ.ವೇದವ್ಯಾಸ ಕಾಮತ್ ಮತ್ತು ಅವರ ನಿಕಟವರ್ತಿ ನರೇಶ್ ಶೆಣೈ ಭಾಗಿಯಾಗಿರುವ ಸಂಶಯವನ್ನು ಕಟುಂಬಸ್ಥರು ವ್ಯಕ್ತಪಡಿಸಿದರು. // ಈ ವಿಭಾಗದ ಇನ್ನಷ್ಟು ಸುದ್ದಿಗಳಿಗಾಗಿ ಕ್ಲ್ಕಿಕ್ಕಿಸಿ –  Mangalore News Online –

Open

error: Content is protected !!