ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ – ರಾಹುಲ್ ಗಾಂಧಿ

Kannada News (itskannada) ಮಂಡಸೊರ್ (ಮಧ್ಯ ಪ್ರದೇಶ) : ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹತ್ತೇ ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಘೋಷಿಸಿದ್ದಾರೆ.

ಮಂಡಸೊರ್ ಜಿಲ್ಲೆಯ ಪಿಪ್ಲಿಯಲ್ಲಿ ಕಳೆದ ವರ್ಷ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟ ರೈತರ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಮಲ್ ನಾಥ್(ಮ. ಪ್ರ. ಕಾಂಗ್ರೆಸ್ ಅಧ್ಯಕ್ಷ) ಹಾಗೂ ಜ್ಯೋತಿರಾದಿತ್ಯ ಸಿಂಧ್ಯಾ(ರಾಜ್ಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ) ಸಮ್ಮುಖದಲ್ಲಿ ಹೇಳುತ್ತಿದ್ದೇನೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹತ್ತೇ ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದರು.

ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಡ ದಲ್ಲಿ ಈ ವರ್ಷ ನವಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ///