ಪೊಗರು ಚಿತ್ರದ 2ನೇ ಹಂತದ ಚಿತ್ರೀಕರಣ

15

Film News (itskannada) ಸ್ಯಾಂಡಲ್ ವುಡ್ ನ್ಯೂಸ್ : ಪೊಗರು ಚಿತ್ರದ  2ನೇ ಹಂತದ ಚಿತ್ರೀಕರಣ : ನಂದ ಕಿಶೋರ್ ನಿರ್ದೇಶನ ಹಾಗೂ   ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ  2ನೇ ಹಂತದ ಚಿತ್ರೀಕರಣ ಮೇ 20ರಿಂದ ಶುರುವಾಗಲಿದೆ.ಪೊಗರು ಚಿತ್ರದ ಚಿತ್ರೀಕರಣ ಮಾರ್ಚ್ ನಲ್ಲಿ ಶುರುವಾಗಿ ಇದೀಗ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಮೇ 20ರಿಂದ ಬೆಂಗಳೂರು ಅಥವಾ ಮಂಗಳೂರಿನಲ್ಲಿ ನಡೆಯಲಿದೆ.

ಪೊಗರು ಚಿತ್ರದಲ್ಲಿ 8ನೇ ತರಗತಿ ವಿದ್ಯಾರ್ಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಧ್ರುವ ಸರ್ಜಾ ಅವರು ಬರೋಬ್ಬರಿ 30 ಕೆಜಿ ತೂಕ ಇಳಿಸಿಕೊಂಡಿದ್ದರು. ಇದೀಗ ಮೇ 20ರಿಂದ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದ್ದು ಧ್ರುವ ಸರ್ಜಾ ಮತ್ತೆ ತಮ್ಮ ಮೈಕಟ್ಟನ್ನು ವೃದ್ಧಿಸಿಕೊಳ್ಳಲಿದ್ದಾರೆ.

ಇನ್ನು ಚಿತ್ರಕ್ಕೆ ನಾಯಕಿ ಯಾರು ಎಂಬುದು ಅಂತಿಮವಾಗಿಲ್ಲ. ಎರಡನೇ ಹಂತದ ಚಿತ್ರೀಕರಣಕ್ಕೂ ಮುನ್ನ ನಿರ್ದೇಶಕರು ನಾಯಕಿಯನ್ನು ಅಂತಿಮಗೊಳಿಸಲಿದ್ದಾರೆ.

ಚಿತ್ರವನ್ನು ನಂದ ಕಿಶೋರ್ ನಿರ್ದೇಶಿಸುತ್ತಿದ್ದು ಗಂಗಾಧರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದು ವೈಧಿ ಛಾಯಾಗ್ರಹಣವಿರಲಿದೆ. //// ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ತಪ್ಪದೆ ಕ್ಲಿಕಿಸಿ – Sandalwood News


ತ್ವರಿತ ಕನ್ನಡ ಸುದ್ದಿ ಹಾಗೂ ಕ್ಷಣಕ್ಷಣದ ಕನ್ನಡ ನ್ಯೂಸ್ ಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ

Stay Updated with itsKannada, to know more Latest Kannada News - Read Kannada News Today Updates Kannada News Online - Get Latest News Headlines Breaking News in Kannada


.
error: Content is protected !!