ಇಂಗ್ಲೆಂಡ್ ತಂಡದ ವಿರುದ್ಧ ಭಾರತ ಟೆಸ್ಟ್ ತಂಡ ಪ್ರಕಟ

0

ಕನ್ನಡ ನ್ಯೂಸ್- Kannada News : ಇಂಗ್ಲೆಂಡ್ ತಂಡದ ವಿರುದ್ಧ ಭಾರತ ಟೆಸ್ಟ್ ತಂಡ ಪ್ರಕಟ

ಆಗಸ್ಟ್ 1 ರಿಂದ 3 ಪಂದ್ಯಗಳ ಇಂಗ್ಲೆಂಡ್ ವಿರುದ್ಧ ಭಾರತ ಟೆಸ್ಟ್ ಸರಣಿಯನ್ನು ಆಡಲಿದ್ದು, ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಆರಂಭಿಕ ಆಟಗಾರ ರೋಹಿತ್ ಶರ್ಮಾ ಗೆ ಕೊಕ್ ನೀಡಿದ್ದು, ಇಂಜುರಿಯಿಂದ ಬಳಲುತ್ತಿರುವ ಭುವನೇಶ್ವರ್ ಕುಮಾರ್ ರನ್ನು ತಂಡದಿಂದ ಕೈಬಿಡಲಾಗಿದೆ.
ಇನ್ನು, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಟಿ20 ಸರಣಿ ಗೆದ್ದರೆ, ಇಂಗ್ಲೆಂಡ್ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿತು. ಇದರೊಂದಿಗೆ, ಎರಡೂ ತಂಡಗಳು ಸಮಬಲ ಸಾಧಿಸಿದ್ದು, ಟೆಸ್ಟ್ ಸರಣಿಯನ್ನು ಗೆಲ್ಲಲು ಎರಡೂ ತಂಡಗಳು ಭರ್ಜರಿ ತಯಾರಿ ನಡೆಸಿವೆ.
ಭಾರತ ತಂಡ ಇಂತಿದೆ : ವಿರಾಟ್ ಕೊಹ್ಲಿ (ನಾಯಕ), ಆಜಿಂಕ್ಯ ರಹಾನೆ (ಉಪನಾಯಕ), ಶಿಖರ್ ಧವನ್, ಕೆ ಎಲ್ ರಾಹುಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮುರಳಿ ವಿಜಯ್, ಚೇತೇಶ್ವರ ಪೂಜಾರ, ಕರುಣ್ ನಾಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್. ////

You're currently offline