ಕೊಹ್ಲಿಗೆ ವರ್ಷದ ಕ್ರಿಕೆಟಿಗ ಗೌರವ

Kannada News (itskannada) Sports News : ನವದೆಹಲಿ : ಕೊಹ್ಲಿಗೆ ವರ್ಷದ ಕ್ರಿಕೆಟಿಗ ಗೌರವ : ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಲ್ಲಿ ತೋರಿದ್ದ ಉತ್ತಮ ಬ್ಯಾಟಿಂಗ್ ಪ್ರದರ್ಶನ ಕಾರಣ ಬಿಸಿಸಿಐ ವರ್ಷದ ಕ್ರಿಕೆಟಿಗರಿಗೆ ನೀಡಲಾಗುವ ಪ್ರತಿಷ್ಠಿತ ಪಾಲಿ ಉಂಬ್ರಿಗರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಹಿಳಾ ಕ್ರಿಕೆಟ್ ತಾರೆಯರಾದ ಹರ್ಮನ್ ಪ್ರೀತ್ ಕೌರ್ ಮತ್ತು ಸ್ಮೃತಿ ಮಂಧಾನ ಅವರಿಗೆ ವರ್ಷದ ಮಹಿಳಾ ಆಟಗಾರ್ತಿ ಪ್ರಶಸ್ತಿ ನೀಡಿ ಗೌರವಿಸಲಿದೆ.
2016-17 ಹಾಗೂ 2017-18 ನೇ ಸಾಲಿನಲ್ಲಿ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರಿಗೆ ಪಾಲಿ ಉಂಬ್ರಿಗರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಜೂ. 14 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ವಿತರಿಸಲಾಗುತ್ತದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. //// Sports News Kannada