ನಾಮಪತ್ರ ಹಿಂಪಡೆದ ಶೀರೂರು ಶ್ರೀ-ಕಾರಣವೇನು

22

Udupi : ( itskannada ) ಉಡುಪಿ : ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಉಡುಪಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಜಿ ಅವರು ಇಂದು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಪ್ರಧಾನಿ ಮೋದಿಗೆ ಮುಜುಗರವಾಗಬಾರದೆಂದು ನಾಮಪತ್ರ ವಾಪಸ್ ಪಡೆದಿರುವುದಾಗಿ ಶ್ರೀಗಳು ತಿಳಿಸಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸುವ ಮುನ್ನ, ಬಿಜೆಪಿಯ ಟಿಕೆಟ್ ಆಕಾಂಕ್ಷಿ ಯಾಗಿದ್ದರು. ಶಾಸಕ ರಘುಪತಿ ಭಟ್ ಅವರ ಕಾರ್ಯವೈಖರಿಯಿಂದ ಬೇಸರವಾಗಿದ್ದು, ತಾನು ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಸ್ವಾಮೀಜಿ ಹೇಳಿಕೊಂಡಿದ್ದರು.

ಪ್ರದಾನಿ ಮೋದಿ ಅಥವಾ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದರೆ ನಾಮಪತ್ರ ವಾಪಾಸ್ ಪಡೆಯುವ ಕುರಿತು ಪರಿಶೀಲಿಸುತ್ತೇನೆ ಎಂದು ಶೀರೂರು ಶ್ರೀ ಈ ಹಿಂದೆ ಹೇಳಿದ್ದರು. // ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ – Udupi News Online – Politics – Karnataka Politics News

Open

error: Content is protected !!